ಮಂಗಳೂರು: ಬೀಚ್‌ನಲ್ಲಿ ಪ್ರೇಮಿಗಳ ಜೋಡಿಗೆ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಯುವಕ ತನ್ನ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಡೆತ್‌ನೋಟ್ ಕೂಡ ಪತ್ತೆಯಾಗಿದೆ ಎಂದು ವರದಿಯಾಗಿದೆ.
ಅಕ್ಟೋಬರ್ 25ರ ರಾತ್ರಿ ಬೀಚ್‌ನಲ್ಲಿ ಪ್ರೇಮಿಗಳ ಜೋಡಿಯೊಂದನ್ನು ತಡೆದು ನಿಲ್ಲಿಸಿ ಕಿರುಕುಳ ನೀಡಿದ ಆರೋಪ ಯುವಕರ ಗುಂಪಿನ ವಿರುದ್ಧ ಕೇಳಿಬಂದಿತ್ತು. ಈ ಸಂಬಂಧ ಬಂದ ದೂರಿನ ಆಧಾರದ ಮೇಲೆ ಸುರತ್ಕಲ್ ಪೊಲೀಸರು ಯುವಕ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕ ಆತ್ಮಹತ್ಯೆ ಮಾಡಿಕೊಂಡಿರುವುದು ವರದಿಯಾಗಿದೆ.





