ಮಂಗಳೂರು: ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶಾಲೆಗೆ ತೆರಳುತ್ತಿದ್ದ 9ನೇ ತರಗತಿಯ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಕರೆದೊಯ್ದ ಆರೋಪದ ಮೇಲೆ 23 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಬಾಗಲಕೋಟೆ ಮೂಲದ ಗುಡೂಸಾಬ್ ಅಲಿಯಾಸ್ ಆಶಿಫ್ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿ ಶಾಲೆಗೆ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಬಾಲಕಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.
ಪೊಲೀಸರು ಸೋಮೇಶ್ವರ ಪ್ರದೇಶದಲ್ಲಿ ಬಾಲಕಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ ಎಂದು ವರದಿಯಾಗಿದೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.





