31 October 2026 |

ದೀಪಾವಳಿಗೆ ಕರ್ನಾಟಕದಲ್ಲಿ ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಲು ಅನುಮತಿ

  • 31 Oct 2026 10:02:45 AM

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿಸುವುದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಸಾರ್ವಜನಿಕರ ಆರೋಗ್ಯ ಮತ್ತು ಪರಿಸರದ ಮೇಲಿನ ಮಾಲಿನ್ಯದ ಪರಿಣಾಮವನ್ನು ಕಡಿಮೆ ಮಾಡುವ ಉದ್ದೇಶದಿಂದ ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ಕಲ್ಪಿಸಲಾಗಿದೆ.

 

ಈ ಕುರಿತು ಮಾಹಿತಿ ನೀಡಿರುವ ಪರಿಸರ ಸಚಿವ ರಾಮಲಿಂಗಾ ರೆಡ್ಡಿ, ಸಾರ್ವಜನಿಕರು ಕಡ್ಡಾಯವಾಗಿ ಪ್ರಮಾಣೀಕೃತ ಹಸಿರು ಪಟಾಕಿಗಳನ್ನೇ ಬಳಸಬೇಕು ಎಂದು ಮನವಿ ಮಾಡಿದ್ದಾರೆ. ಪರಿಸರ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

 

ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ರಾಜ್ಯದ ಪೊಲೀಸ್ ಆಯುಕ್ತರು ಹಾಗೂ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ದೀಪಾವಳಿ ಆಚರಣೆಯ ವೇಳೆ ಸಾರ್ವಜನಿಕರು ನಿಗದಿತ ಸಮಯ ಮತ್ತು ನಿಯಮಗಳನ್ನು ಪಾಲಿಸುವಂತೆ ಸರ್ಕಾರ ತಿಳಿಸಿದೆ.