31 October 2026 |

ಮದುವೆ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಬ್ಲ್ಯಾಕ್‌ಮೇಲ್ ಆರೋಪ: ಉಡುಪಿ ವ್ಯಕ್ತಿಯಿಂದ ₹42.97 ಲಕ್ಷ ಹಣ ವಸೂಲಿ!

  • 31 Oct 2026 10:04:54 AM

ಉಡುಪಿ: ಮದುವೆ ಸಂಬಂಧದ ವಿಚಾರವಾಗಿ ಪರಿಚಯವಾಗಿದ್ದ ವ್ಯಕ್ತಿಯೊಬ್ಬರಿಗೆ ಬೆದರಿಕೆ ಹಾಕಿ ಬರೋಬ್ಬರಿ ₹42.97 ಲಕ್ಷ ಹಣ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರತ್ನ ಎಚ್. ಮತ್ತು ಹೇಮಂತ್ ಎಂಬ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

 

ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ ಬಳಿಕ ಹಣಕ್ಕಾಗಿ ಬೆದರಿಕೆ ಹಾಕಲಾಗಿದೆ ಎಂದು ಸಂತ್ರಸ್ತ ವ್ಯಕ್ತಿ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಪ್ರಕಾರ, 2024ರ ಜನವರಿಯಿಂದ 2026ರ ಜನವರಿವರೆಗೆ ವಿವಿಧ ಹಂತಗಳಲ್ಲಿ ಒಟ್ಟು ₹42.97 ಲಕ್ಷ ಹಣವನ್ನು ವರ್ಗಾಯಿಸಿಕೊಳ್ಳಲಾಗಿದೆ ಎನ್ನಲಾಗಿದೆ.

 

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಗಳಾದ ನಾಗರತ್ನ ಎಚ್. ಮತ್ತು ಹೇಮಂತ್ ಅವರನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ. ಬಳಿಕ ಇಬ್ಬರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.