01 November 2026 |

ವಿದ್ಯಾರ್ಥಿನಿಯರಿಗೆ ಪ್ರೀತಿಯ ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದ ಉಪನ್ಯಾಸಕನಿಗೆ ವಿದ್ಯಾರ್ಥಿನಿಯರಿಂದ ತರಾಟೆ

  • 01 Nov 2026 01:59:46 PM

ಮಂಡ್ಯ: ಕಾಲೇಜಿನ ವಿದ್ಯಾರ್ಥಿನಿಯರಿಗೆ ಮೊಬೈಲ್ ಮೂಲಕ ಪ್ರೀತಿಯ ಹೆಸರಿನಲ್ಲಿ ಅಸಭ್ಯ ಸಂದೇಶಗಳನ್ನು ಕಳುಹಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಉಪನ್ಯಾಸಕನಿಗೆ ವಿದ್ಯಾರ್ಥಿನಿಯರು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಘಟನೆ ನಾಗಮಂಗಲ-ಮಂಡ್ಯ ರಸ್ತೆಯಲ್ಲಿರುವ ಪದವಿ ಕಾಲೇಜಿನಲ್ಲಿ ನಡೆದಿದೆ.

 

ಕಾಲೇಜಿನ ಉಪನ್ಯಾಸಕ ಗಂಗೂ ಎಂಬಾತ ವಿದ್ಯಾರ್ಥಿನಿಯರ ಮೊಬೈಲ್ ಸಂಖ್ಯೆಯನ್ನು ಪಡೆದುಕೊಂಡು ಅವರಿಗೆ ಪದೇಪದೆ ಸಂದೇಶಗಳನ್ನು ಕಳುಹಿಸುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.

 

ವಿದ್ಯಾರ್ಥಿನಿಯರೊಂದಿಗೆ ಮೊಬೈಲ್‌ನಲ್ಲಿ ನಿರಂತರವಾಗಿ ಚಾಟ್ ಮಾಡುತ್ತಿದ್ದ ಆತ, ಸಂಭಾಷಣೆಯ ವೇಳೆ 'ಐ ಲವ್ ಯೂ', 'ಐ ಲೈಕ್ ಯೂ' ಎಂಬಂತಹ ಸಂದೇಶಗಳನ್ನು ಕಳುಹಿಸುತ್ತಿದ್ದ ಎನ್ನಲಾಗಿದೆ. ಈ ಮೂಲಕ ವಿದ್ಯಾರ್ಥಿನಿಯರಿಗೆ ಮಾನಸಿಕವಾಗಿ ತೊಂದರೆ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.

 

ಉಪನ್ಯಾಸಕನ ವರ್ತನೆಯಿಂದ ಬೇಸತ್ತ ವಿದ್ಯಾರ್ಥಿನಿಯರು ಆತನನ್ನು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಘಟನೆ ಕಾಲೇಜು ಆವರಣದಲ್ಲಿ ಚರ್ಚೆಗೆ ಕಾರಣವಾಗಿದೆ.