01 November 2026 |

ಪುತ್ತೂರು: ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಭೀಕರ ಅಪಘಾತ; ಇಬ್ಬರಿಗೆ ಗಂಭೀರ ಗಾಯ

  • 01 Nov 2026 02:01:34 PM

ಪುತ್ತೂರು: ನಗರದ ಪಡೀಲ್–ಬನ್ನೂರು ಕ್ರಾಸ್ ಸಮೀಪ ಅಕ್ಟೋಬರ್ 31ರ ರಾತ್ರಿ ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

 

KA19HW1595 ನೋಂದಣಿ ಸಂಖ್ಯೆಯ ಬೈಕ್ ಬೋಳುವಾರಿನಿಂದ ಕೆಮ್ಮಾಯಿ ಕಡೆಗೆ ಸಾಗುತ್ತಿತ್ತು ಎನ್ನಲಾಗಿದೆ. ಈ ವೇಳೆ ಪಡೀಲ್ ಕಡೆಯಿಂದ ಬಂದ ರಿಕ್ಷಾ ಏಕಾಏಕಿ ಬನ್ನೂರು ರಸ್ತೆಯತ್ತ ತಿರುವು ಪಡೆದಿದೆ. ಪರಿಣಾಮ ಬೈಕ್ ಸವಾರನ ನಿಯಂತ್ರಣ ತಪ್ಪಿ ರಿಕ್ಷಾಕ್ಕೆ ನೇರವಾಗಿ ಡಿಕ್ಕಿ ಹೊಡೆದಿದ್ದಾನೆ ಎಂದು ತಿಳಿದುಬಂದಿದೆ.

 

ಘಟನೆಯಲ್ಲಿ ರಿಕ್ಷಾ ಚಾಲಕ ಹಾಗೂ ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಬೈಕ್ ಸವಾರ ಡೊಮಿನೋಸ್ ಪಿಜ್ಜಾ ಸಂಸ್ಥೆಯಲ್ಲಿ ಡೆಲಿವರಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

 

ಅಪಘಾತ ಸಂಭವಿಸಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಗಾಯಾಳುಗಳನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.