02 November 2026 |

ಸ್ನೇಹ ಮಿಲನ ಕಲ್ಲಡ್ಕ ಸಂಸ್ಥೆಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

  • 01 Nov 2026 06:38:38 PM

ಕಲ್ಲಡ್ಕ: ಸಮಾಜಸೇವೆ, ಸ್ನೇಹ, ಒಗ್ಗಟ್ಟು ಹಾಗೂ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಕಳೆದ 12 ವರ್ಷಗಳಿಂದ ನಿರಂತರವಾಗಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಸ್ನೇಹ ಮಿಲನ ಕಲ್ಲಡ್ಕ ಸಂಸ್ಥೆಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

 

ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕಾರ್ಯಕರ್ತರನ್ನೊಳಗೊಂಡಿರುವ ಈ ಸಂಸ್ಥೆಯು ಹಲವು ವರ್ಷಗಳಿಂದ ಸಮಾಜದ ಹಿಂದುಳಿದ ವರ್ಗದವರಿಗೆ ನೆರವು ನೀಡುವ ಮೂಲಕ ಗಮನ ಸೆಳೆಯುತ್ತಿದೆ. ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಸಹಾಯಹಸ್ತ ಚಾಚುವುದು, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದು ಸೇರಿದಂತೆ ಅನೇಕ ಜನಪರ ಹಾಗೂ ಸಮಾಜಮುಖಿ ಕಾರ್ಯಕ್ರಮಗಳನ್ನು ಸಂಸ್ಥೆ ಹಮ್ಮಿಕೊಳ್ಳುತ್ತಾ ಬಂದಿದೆ.

 

ಯಾವುದೇ ಪ್ರಚಾರದ ನಿರೀಕ್ಷೆಯಿಲ್ಲದೆ ಮಾನವೀಯ ನೆಲೆಯಲ್ಲಿ ಸಲ್ಲಿಸುತ್ತಿರುವ ಸೇವೆಗೆ ಇದೀಗ ಜಿಲ್ಲಾ ಮಟ್ಟದ ಗೌರವ ಸಂದಿರುವುದು ಸಂಸ್ಥೆಯ ಸದಸ್ಯರಲ್ಲಿ ಸಂತಸ ಮೂಡಿಸಿದೆ.

 

ಸಂಸ್ಥೆಯ ನಿರಂತರ ಸಮಾಜಸೇವಾ ಚಟುವಟಿಕೆಗಳು ಹಾಗೂ ಜನಪರ ಕಾರ್ಯಗಳನ್ನು ಗುರುತಿಸಿ ನೀಡಿರುವ ಈ ಪ್ರಶಸ್ತಿಯು ಮುಂದಿನ ದಿನಗಳಲ್ಲಿಯೂ ಹೆಚ್ಚಿನ ಸಾಮಾಜಿಕ ಕಾರ್ಯಗಳನ್ನು ಕೈಗೊಳ್ಳಲು ಪ್ರೇರಣೆಯಾಗಲಿದೆ ಎಂದು ಸಂಸ್ಥೆಯ ಸಾಧನೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.