ಮೈಸೂರು: ಸ್ಕೂಟರ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ದಾರುಣ ಘಟನೆ ಮೈಸೂರಿನ ಅರಮನೆ ಸಮೀಪದ ಚಾಮರಾಜ ವೃತ್ತದ ಬಳಿ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿನಿಯನ್ನು 17 ವರ್ಷದ ವೈಷ್ಣವಿ ಎಂದು ಗುರುತಿಸಲಾಗಿದೆ. ಮೈಸೂರಿನ ಎನ್.ಆರ್. ಮೊಹಲ್ಲಾ ನಿವಾಸಿಗಳಾದ ವೆಂಕಟೇಶ್ ಮತ್ತು ಜ್ಯೋತಿ ದಂಪತಿಯ ಪುತ್ರಿಯಾಗಿದ್ದ ವೈಷ್ಣವಿ, ನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು.
ಟ್ಯೂಷನ್ ಮುಗಿಸಿಕೊಂಡು ತಂದೆಯೊಂದಿಗೆ ಸ್ಕೂಟರ್‌ನಲ್ಲಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಈ ವೇಳೆ ಸ್ಕೂಟರ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.





