04 November 2026 |

ಮಂಗಳೂರಿನಲ್ಲಿ ಮೀನು ಸಾಗಣೆ ವಾಹನಗಳ ಅಶಿಸ್ತಿನ ಸಂಚಾರ: ಒಂದೇ ವರ್ಷದಲ್ಲಿ 604 ಪ್ರಕರಣ ದಾಖಲು, ₹3.02 ಲಕ್ಷ ದಂಡ ವಸೂಲಿ!

  • 04 Nov 2026 07:55:41 PM

ಮಂಗಳೂರು: ನಗರದ ರಸ್ತೆಗಳಲ್ಲಿ ಮೀನು ಸಾಗಣೆ ವಾಹನಗಳಿಂದ ತ್ಯಾಜ್ಯ ನೀರು ಸೋರಿಕೆಯಾಗುತ್ತಿರುವ ಸಮಸ್ಯೆ ಮತ್ತೆ ಗಮನ ಸೆಳೆದಿದೆ. ವಾಹನಗಳಿಂದ ರಸ್ತೆಗಳ ಮೇಲೆ ಕೊಳಕು ನೀರು ಹರಿದು ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಂಚಾರ ಪೊಲೀಸರು ನಿರಂತರವಾಗಿ ಕ್ರಮ ಕೈಗೊಳ್ಳುತ್ತಿದ್ದಾರೆ.

 

2026ರಲ್ಲಿ ಈವರೆಗೆ ನಿಯಮ ಉಲ್ಲಂಘಿಸಿದ ಮೀನು ಸಾಗಣೆ ವಾಹನಗಳ ವಿರುದ್ಧ ಒಟ್ಟು 604 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ವಾಹನ ಸವಾರರಿಂದ ಸುಮಾರು ₹3.02 ಲಕ್ಷ ದಂಡವನ್ನು ಸಂಗ್ರಹಿಸಲಾಗಿದೆ.

 

ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಇಂತಹ ಪ್ರಕರಣಗಳ ಸಂಖ್ಯೆಯಲ್ಲಿ ಶೇ.30ರಷ್ಟು ಏರಿಕೆಯಾಗಿದೆ. ಮೀನು ಸಾಗಣೆ ಮಾಡುವಾಗ ವಾಹನಗಳಿಂದ ತ್ಯಾಜ್ಯ ನೀರು ರಸ್ತೆಗೆ ಹರಿಯದಂತೆ ಸೂಕ್ತ ಮುನ್ನೆಚ್ಚರಿಕೆ ವಹಿಸುವುದು ಕಡ್ಡಾಯವಾಗಿದೆ.

 

ನಿಯಮಗಳನ್ನು ಪಾಲಿಸದೆ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವ ವಾಹನಗಳ ವಿರುದ್ಧ ಮುಂದಿನ ದಿನಗಳಲ್ಲಿಯೂ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.