06 November 2026 |

ಮಂಗಳೂರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಪುತ್ತೂರಿನ ಯುವಕನ ಬಂಧನ – 3.8 ಕೆ.ಜಿ. ಗಾಂಜಾ, ಕಾರು ಸಹಿತ ₹3.94 ಲಕ್ಷ ಮೌಲ್ಯದ ವಸ್ತುಗಳು ವಶ!

  • 06 Nov 2026 06:10:51 PM

ಮಂಗಳೂರು: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ 23 ವರ್ಷದ ಯುವಕನೊಬ್ಬನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಸುಮಾರು 3 ಕೆ.ಜಿ. 800 ಗ್ರಾಂ ಗಾಂಜಾ, ಕಾರು ಹಾಗೂ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

 

ನವೆಂಬರ್ 5ರಂದು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆ ಕ್ರಾಸ್ ರೈಲ್ವೆ ಸೇತುವೆ ಬಳಿ ಗಾಂಜಾ ಮಾರಾಟಕ್ಕೆ ಸಿದ್ಧತೆ ನಡೆಸುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಮತ್ತು ಪಣಂಬೂರು ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.