ಮಂಗಳೂರು: ನಗರದಲ್ಲಿ ನಿಷೇಧಿತ ಮಾದಕವಸ್ತು ಎಲ್‌ಎಸ್‌ಡಿ (LSD) ಮಾರಾಟದಲ್ಲಿ ತೊಡಗಿದ್ದ ಆರೋಪದ ಮೇಲೆ ಇಬ್ಬರನ್ನು ಮಂಗಳೂರು ನಗರ ಅಪರಾಧ ಪತ್ತೆ ದಳದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.
ಬಂಧಿತರಿಂದ ಸುಮಾರು ₹3 ಲಕ್ಷ ಮೌಲ್ಯದ 100 ಎಲ್‌ಎಸ್‌ಡಿ ಡ್ರಗ್ಸ್ ಸ್ಟ್ರಿಪ್‌ಗಳು ಹಾಗೂ ಮೂರು ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಎಲ್ಲಾ ವಸ್ತುಗಳ ಒಟ್ಟು ಮೌಲ್ಯ ₹3.35 ಲಕ್ಷ ಎಂದು ತಿಳಿದುಬಂದಿದೆ.
ಬಂಧಿತರನ್ನು ಮಂಗಳೂರಿನ ಅಳಪೆ, ಪಡೀಲ್ ನಿವಾಸಿ ನಿಹಾಲ್ ಸ್ಯಾಂಪ್ರೆಸ್ ರೋಡ್ರಿಗಸ್ (30) ಹಾಗೂ ಉರ್ವಸ್ಟೋರ್ ದಡ್ಡಲಕಾಡ್ ನಿವಾಸಿ ಸಿದ್ದಾರ್ಥ ಶೆಟ್ಟಿ (35) ಎಂದು ಗುರುತಿಸಲಾಗಿದೆ.





