08 November 2026 |

ಕಡಬದಲ್ಲಿ ಮದುವೆ ಸಮಾರಂಭಕ್ಕೆ ತೆರಳಿದ್ದ ವ್ಯಕ್ತಿಯ ಬೈಕ್ ಕಳವು: ಪ್ರಕರಣ ದಾಖಲು

  • 08 Nov 2026 12:21:47 PM

ಕಡಬ: ಮದುವೆ ಸಮಾರಂಭದಲ್ಲಿ ಭಾಗವಹಿಸಲು ತೆರಳಿದ್ದ ವ್ಯಕ್ತಿಯೊಬ್ಬರು ನಿಲ್ಲಿಸಿದ್ದ ಬೈಕ್ ಕಳವಾಗಿರುವ ಘಟನೆ ಕಡಬದಲ್ಲಿ ನಡೆದಿದೆ. ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಕಡಬ ಗ್ರಾಮದ ತಿಮರಡ್ಕ ನಿವಾಸಿ ಅನ್ಸಿಫ್ ಟಿ. ಅವರು ಕಡಬ–ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಅನುಗ್ರಹ ಹಾಲ್ ಸಮೀಪದ ಇಪ್ರತ್ ಆರ್ಕೆಡ್ ಕಟ್ಟಡದ ಕೆಳಭಾಗದಲ್ಲಿ ತಮ್ಮ ಬೈಕ್ ನಿಲ್ಲಿಸಿ ಮದುವೆ ಸಮಾರಂಭಕ್ಕೆ ತೆರಳಿದ್ದರು. ಶುಕ್ರವಾರ ರಾತ್ರಿ ಈ ಬೈಕ್ ಕಳವಾಗಿರುವುದು ಬೆಳಕಿಗೆ ಬಂದಿದೆ. ಬೈಕ್ ಮಾಲೀಕ ಮುನೀರ್ ಅವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.

 

ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ರಾತ್ರಿ ವೇಳೆ ಬೀದಿ ದೀಪಗಳನ್ನು ಆರಿಸಿ ಕತ್ತಲಿನ ಲಾಭ ಪಡೆದು ಬೈಕ್ ಕಳವು ಮಾಡಿರುವುದು ಕಂಡುಬಂದಿದೆ ಎಂದು ತಿಳಿದುಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.