ಮಂಗಳೂರು: ಉಚಿತವಾಗಿ ಟಿವಿ ಚಾನೆಲ್‌ಗಳನ್ನು ವೀಕ್ಷಿಸಬಹುದು ಎಂಬ ಫೇಸ್‌ಬುಕ್ ಜಾಹೀರಾತನ್ನು ನಂಬಿ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿದ 45 ವರ್ಷದ ವ್ಯಕ್ತಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದಿದ್ದಾರೆ. ಈ ಮೂಲಕ ಅವರು ಬರೋಬ್ಬರಿ ₹1.96 ಲಕ್ಷ ಹಣ ಕಳೆದುಕೊಂಡಿದ್ದಾರೆ.
ಫೇಸ್‌ಬುಕ್‌ನಲ್ಲಿ ಕಾಣಿಸಿಕೊಂಡ ಜಾಹೀರಾತಿನ ಮೂಲಕ ಆ್ಯಪ್ ಡೌನ್‌ಲೋಡ್ ಮಾಡಿದ ಬಳಿಕ ವ್ಯಕ್ತಿ ವಂಚನೆಗೆ ಒಳಗಾಗಿರುವುದಾಗಿ ತಿಳಿದುಬಂದಿದೆ.
ಇದೇ ವೇಳೆ, ಮಂಗಳೂರಿನಲ್ಲಿ ಮತ್ತೊಂದು ಸೈಬರ್ ವಂಚನೆ ಪ್ರಕರಣವೂ ವರದಿಯಾಗಿದೆ. ವ್ಯಕ್ತಿಯೊಬ್ಬರ ವಾಟ್ಸ್‌ಆ್ಯಪ್ ಖಾತೆಯನ್ನು ಹ್ಯಾಕ್ ಮಾಡಿದ ವಂಚಕರು, ಅವರಿಂದ ₹52 ಸಾವಿರ ಹಣವನ್ನು ವಂಚಿಸಿದ್ದಾರೆ.
ಈ ಎರಡೂ ಘಟನೆಗಳು ಸೈಬರ್ ವಂಚನೆಗಳ ಬಗ್ಗೆ ಸಾರ್ವಜನಿಕರು ಹೆಚ್ಚಿನ ಜಾಗ್ರತೆ ವಹಿಸುವ ಅಗತ್ಯವನ್ನು ಮತ್ತೊಮ್ಮೆ ಎಚ್ಚರಿಸಿವೆ.





