ಸುಳ್ಯ: ತಾಲೂಕಿನ ಮುಪ್ಪೇರಿಯ ಗ್ರಾಮದ ಉರುಂಬಿ ಪ್ರದೇಶದಲ್ಲಿ ಯಾವುದೇ ಅಧಿಕೃತ ಪರವಾನಗಿ ಪಡೆಯದೆ ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹಿಸಿಟ್ಟಿದ್ದ ಪಟಾಕಿಗಳನ್ನು ಬೆಳ್ಳಾರೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಅಕ್ರಮವಾಗಿ ಪಟಾಕಿಗಳನ್ನು ಸಂಗ್ರಹಿಸಿಟ್ಟಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸಂಬಂಧಪಟ್ಟ ಸ್ಥಳಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಈ ವೇಳೆ ಪರವಾನಗಿ ಇಲ್ಲದೆ ಮಾರಾಟಕ್ಕಾಗಿ ಇಡಲಾಗಿದ್ದ ಪಟಾಕಿಗಳು ಪತ್ತೆಯಾಗಿದ್ದು, ಅವುಗಳನ್ನು ವಶಕ್ಕೆ ಪಡೆಯಲಾಗಿದೆ.
ಈ ಸಂಬಂಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪಟಾಕಿಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿರುವುದರ ಹಿಂದಿನ ಉದ್ದೇಶ ಹಾಗೂ ಇತರ ವಿವರಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.





