10 November 2026 |

ಅಂಗನವಾಡಿ ಕಾರ್ಯಕರ್ತೆಯರಿಗೆ ಮೂರು ತಿಂಗಳ ವೇತನ ಬಾಕಿ: ಒಂದು ವಾರದ ಗಡುವು, ಇಲ್ಲದಿದ್ದರೆ ಪ್ರತಿಭಟನೆ ಎಚ್ಚರಿಕೆ

  • 10 Nov 2026 04:25:23 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಕಳೆದ ಮೂರು ತಿಂಗಳಿನಿಂದ ವೇತನ ಪಾವತಿಯಾಗಿಲ್ಲ ಎಂದು ಸಂಘಟನೆ ಆರೋಪಿಸಿದೆ.

 

ವೇತನ ವಿಳಂಬದಿಂದ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ ಎಂದು ಸಂಘಟನೆ ಅಸಮಾಧಾನ ವ್ಯಕ್ತಪಡಿಸಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡು ಒಂದು ವಾರದೊಳಗೆ ಬಾಕಿ ವೇತನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದೆ.

 

ನಿಗದಿತ ಅವಧಿಯೊಳಗೆ ವೇತನ ಪಾವತಿಸದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘಟನೆ ಎಚ್ಚರಿಕೆ ನೀಡಿದೆ.