11 November 2026 |

ಬೆಳ್ತಂಗಡಿಯಲ್ಲಿ ಭೀಕರ ಸರಣಿ ಅಪಘಾತ: ಸ್ಕೂಟರ್ ಸವಾರ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ

  • 11 Nov 2026 10:00:43 AM

ಬೆಳ್ತಂಗಡಿ: ಪಟ್ಟಣದ ಚರ್ಚ್‌ ರಸ್ತೆಯಲ್ಲಿ ನವೆಂಬರ್ 11ರ ಮುಂಜಾನೆ ಗೂಡ್ಸ್ ಟೆಂಪೋ ಹಾಗೂ ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

 

ಅಪಘಾತದಲ್ಲಿ ನಾವೂರು ನಿವಾಸಿ ಸಂತೋಷ್ (32) ಮೃತಪಟ್ಟವರು. ಕಣಿಯೂರು ಗ್ರಾಮದ ಪಿಲಿಗೂಡು ನಿವಾಸಿ ಮೋಹನ್ (33) ಗಂಭೀರವಾಗಿ ಗಾಯಗೊಂಡಿದ್ದಾರೆ.

 

ಮಂಗಳೂರಿನಿಂದ ಚಿಕ್ಕಮಗಳೂರು ಕಡೆಗೆ ತೆರಳುತ್ತಿದ್ದ ಟಾಟಾ ಗೂಡ್ಸ್ ವಾಹನವು ಗುರುವಾಯನಕೆರೆ ದಿಕ್ಕಿನಲ್ಲಿ ಸಾಗುತ್ತಿದ್ದ ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಸ್ಕೂಟರ್‌ನಲ್ಲಿದ್ದ ಸಂತೋಷ್ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಗಾಯಗೊಂಡ ಮೋಹನ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

 

ಗೂಡ್ಸ್ ವಾಹನದ ಚಾಲಕ ನಿದ್ರೆಯ ಮಂಪರಿನಲ್ಲಿದ್ದುದೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಮೃತ ಸಂತೋಷ್ ಮಂಗಳೂರಿನಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಗಾಯಾಳು ಮೋಹನ್ ಪ್ರಿಂಟಿಂಗ್ ಪ್ರೆಸ್‌ನಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದರು.