12 November 2026 |

ಕರಾವಳಿ ಕರ್ನಾಟಕಕ್ಕೆ ಹೊಸ ವಂದೇ ಭಾರತ್ ರೈಲು: ನವೆಂಬರ್ 13ರಂದು ಪ್ರಧಾನಿ ಮೋದಿಯಿಂದ ಚಾಲನೆ

  • 12 Nov 2026 03:30:13 PM

ಮಂಗಳೂರು: ಕರಾವಳಿ ಕರ್ನಾಟಕದ ರೈಲು ಪ್ರಯಾಣಿಕರಿಗೆ ಸಿಹಿಸುದ್ದಿ. ಬೆಂಗಳೂರು, ಮಂಗಳೂರು ಹಾಗೂ ಗೋವಾದ ಮಡಗಾಂವ್ ನಡುವೆ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭವಾಗಲಿದೆ. ನವೆಂಬರ್ 13ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಈ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

 

ಯಶವಂತಪುರದಿಂದ ಮಡಗಾಂವ್‌ವರೆಗೆ ಸಂಚರಿಸುವ ಈ ರೈಲು ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಮಂಗಳೂರು ಜಂಕ್ಷನ್, ಉಡುಪಿ, ಕುಂದಾಪುರ, ಬೈಂದೂರು, ಮುರ್ಡೇಶ್ವರ, ಗೋಕರ್ಣ ಮತ್ತು ಕಾರವಾರ ಸೇರಿದಂತೆ ಪ್ರಮುಖ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಲಿದೆ.

 

ನವೆಂಬರ್ 13ರಂದು ಉದ್ಘಾಟನಾ ವಿಶೇಷ ರೈಲುಗಳು ಸಂಚರಿಸಲಿದ್ದು, ನವೆಂಬರ್ 15ರಿಂದ ನಿಯಮಿತ ರೈಲು ಸೇವೆ ಆರಂಭವಾಗಲಿದೆ. ರೈಲು ವಾರದಲ್ಲಿ ಆರು ದಿನ ಸಂಚರಿಸಲಿದೆ.

 

ಈ ಹೊಸ ರೈಲು ಸೇವೆಯಿಂದ ಬೆಂಗಳೂರು ಮತ್ತು ಕರಾವಳಿ ಕರ್ನಾಟಕದ ನಡುವಿನ ಸಂಪರ್ಕ ಮತ್ತಷ್ಟು ಸುಧಾರಿಸಲಿದ್ದು, ಪ್ರವಾಸಿಗರು, ವಿದ್ಯಾರ್ಥಿಗಳು, ವ್ಯಾಪಾರಿಗಳು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿದೆ.