14 November 2026 |

ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿ ಮಾನವ ತಲೆಬುರುಡೆ ಪತ್ತೆ: ಸ್ಥಳೀಯರಲ್ಲಿ ಆತಂಕ

  • 13 Nov 2026 11:23:26 AM

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಸಮೀಪ ರಾಜ್ಯ ಹೆದ್ದಾರಿ ಬದಿಯಲ್ಲಿ ಮಾನವ ತಲೆಬುರುಡೆಯೊಂದು ಪತ್ತೆಯಾಗಿರುವ ಘಟನೆ ನವೆಂಬರ್ 12ರ ಸಂಜೆ ನಡೆದಿದೆ.

 

ಬಂಟ್ವಾಳ ಮೂಲದ ವ್ಯಕ್ತಿಯೊಬ್ಬರು ವಿದ್ಯುತ್ ಕಂಬಗಳಿಗೆ ತಾಗಿಕೊಂಡಿದ್ದ ಮರದ ಕೊಂಬೆಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದ ವೇಳೆ ರಸ್ತೆ ಬದಿಯಲ್ಲಿ ಮಾನವ ತಲೆಬುರುಡೆಯನ್ನು ಗಮನಿಸಿದ್ದಾರೆ. ತಕ್ಷಣ ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

 

ದೂರಿನ ಆಧಾರದ ಮೇಲೆ ಧರ್ಮಸ್ಥಳ ಪೊಲೀಸರು 422/2026ನೇ ದೂರು ಸಂಖ್ಯೆಯಡಿ ಅರ್ಜಿಯನ್ನು ಸ್ವೀಕರಿಸಿದ್ದಾರೆ. ಪ್ರಕರಣದ ಕುರಿತು ಪರಿಶೀಲನೆ ನಡೆಸಿ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 

ಹೆದ್ದಾರಿ ಬದಿಯಲ್ಲೇ ಮಾನವ ತಲೆಬುರುಡೆ ಪತ್ತೆಯಾಗಿರುವುದು ಸ್ಥಳೀಯರಲ್ಲಿ ಕುತೂಹಲದ ಜೊತೆಗೆ ಆತಂಕವನ್ನೂ ಮೂಡಿಸಿದೆ. ತಲೆಬುರುಡೆ ಯಾರಿಗೆ ಸೇರಿದ್ದು, ಅದು ಅಲ್ಲಿಗೆ ಬಂದಿರುವುದರ ಹಿಂದಿನ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.