ಮಂಗಳೂರು: ನಗರದ ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್‌ನಲ್ಲಿ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ವಾಸಿಸುತ್ತಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಪಣಂಬೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರೆಸ್ಟೋರೆಂಟ್‌ನಲ್ಲಿ ಬಾಂಗ್ಲಾದೇಶದ ಇಬ್ಬರು ಪ್ರಜೆಗಳು ಅಕ್ರಮವಾಗಿ ನೆಲೆಸಿದ್ದು, ಕೆಲಸ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು, ಅಲ್ಲಿ ಕೆಲಸ ಮಾಡುತ್ತಿದ್ದ ಅಶಿಕುಲ್ ಇಸ್ಲಾಂ ಮತ್ತು ಎಂಡಿ ಅಮೀನ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ವಿಚಾರಣೆ ವೇಳೆ ಇಬ್ಬರೂ ಭಾರತದಲ್ಲಿ ನೆಲೆಸಲು ಅಗತ್ಯವಿರುವ ಯಾವುದೇ ಅಧಿಕೃತ ದಾಖಲೆಗಳನ್ನು ಹೊಂದಿಲ್ಲ ಎಂಬುದು ತಿಳಿದುಬಂದಿದೆ.
ಸದ್ಯ ಇಬ್ಬರನ್ನು ಅಕ್ರಮ ವಲಸಿಗರ ಬಂಧನ ಕೇಂದ್ರದಲ್ಲಿ ಇರಿಸಲಾಗಿದ್ದು, ಬಳಿಕ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO) ಮುಂದೆ ಹಾಜರುಪಡಿಸಿ ಬಾಂಗ್ಲಾದೇಶಕ್ಕೆ ಗಡಿಪಾರು ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.





