15 November 2026 |

ಆಲಂಕಾರು ಸಮೀಪ ಭೀಕರ ರಸ್ತೆ ಅಪಘಾತ – ಪಿಕಪ್ ಮತ್ತು ಕಾರು ಮುಖಾಮುಖಿ ಡಿಕ್ಕಿ, ಓರ್ವ ಸಾವು; ಮತ್ತೊಬ್ಬನ ಸ್ಥಿತಿ ಗಂಭೀರ

  • 14 Nov 2026 02:47:28 PM

ಕಡಬ: ಪಿಕಪ್ ವಾಹನ ಹಾಗೂ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ಬೆಳಗ್ಗೆ ಆಲಂಕಾರು ಸಮೀಪದ ನೆಕ್ಕರೆ ಎಂಬಲ್ಲಿ ನಡೆದಿದೆ.

 

ಮಂಗಳೂರಿನಿಂದ ಕಡಬದ ಕಳಾರಕ್ಕೆ ಹಣ್ಣು-ಹಂಪಲುಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನ ಮತ್ತು ಎದುರಿನಿಂದ ಬರುತ್ತಿದ್ದ ಕಾರಿನ ನಡುವೆ ನೆಕ್ಕರೆ ಬಳಿ ಅಪಘಾತ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಪಿಕಪ್ ವಾಹನದಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿದ್ದರು.

 

ಅಪಘಾತ ನಡೆದ ತಕ್ಷಣ ಸ್ಥಳೀಯರು ಗಾಯಾಳುಗಳ ನೆರವಿಗೆ ಧಾವಿಸಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ವ್ಯವಸ್ಥೆ ಮಾಡಿದರು. ಆದರೆ, ಗಾಯಗೊಂಡವರಲ್ಲಿ ಒಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.