17 November 2026 |

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಅಭಿವೃದ್ಧಿಗೆ ₹3.75 ಕೋಟಿ ಅನುದಾನ: ಕಾಮಗಾರಿಗೆ ಶಿಲಾನ್ಯಾಸ

  • 16 Nov 2026 03:43:55 PM

ಪುತ್ತೂರು: ಪುತ್ತೂರಿನ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಅಭಿವೃದ್ಧಿಪಡಿಸುವ ಉದ್ದೇಶದಿಂದ ಸರ್ಕಾರ ₹3.75 ಕೋಟಿ ಅನುದಾನ ಮಂಜೂರು ಮಾಡಿದೆ. ಈ ಅಭಿವೃದ್ಧಿ ಕಾಮಗಾರಿಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಶಿಲಾನ್ಯಾಸ ನೆರವೇರಿಸಿದರು.

 

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಸಮಿತಿಯ ಸದಸ್ಯರು, ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಉಪಸ್ಥಿತರಿದ್ದರು.