ಪುತ್ತೂರು: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಹೋಟೆಲ್ ಸಿಬ್ಬಂದಿಯೊಬ್ಬರು ಮೃತಪಟ್ಟ ಘಟನೆ ನವೆಂಬರ್ 16ರ ತಡರಾತ್ರಿ ನಡೆದಿದೆ.
ಮೃತರನ್ನು ವಿಜಯಪುರ ಜಿಲ್ಲೆಯ ಬಾಗೇವಾಡಿ ನಿವಾಸಿ ಸಂಗನಗೌಡ ಅವರ ಪುತ್ರ ಚಂದ್ರಶೇಖರ ಸಂಗನಗೌಡ (32) ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನ ಹರಿಪ್ರಸಾದ್ ಹೋಟೆಲ್‌ನಲ್ಲಿ ಸಪ್ಲಾಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.
ನವೆಂಬರ್ 16ರಂದು ರಾತ್ರಿ ಹೋಟೆಲ್‌ನ ಕೆಲಸ ಮುಗಿಸಿ ಹೊರಗೆ ತೆರಳಿದ್ದ ಚಂದ್ರಶೇಖರ ಅವರು, ಹೋಟೆಲ್ ಸಮೀಪ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಅವರು ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಬೈಕ್ ಸವಾರನಿಗೂ ಗಾಯಗಳಾಗಿದ್ದು, ಆತ ಸ್ಥಳೀಯ ಸೆಲೂನ್‌ನಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಎಂದು ತಿಳಿದುಬಂದಿದೆ.





