20 November 2026 |

ನೇರಳಕಟ್ಟೆಯಲ್ಲಿ ಭೀಕರ ಅಪಘಾತ: ಲಾರಿ ಡಿಕ್ಕಿಯಾಗಿ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

  • 19 Nov 2026 06:19:53 PM

ವಿಟ್ಲ: ಶಾಲೆ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಮಾಣಿ ಸಮೀಪದ ನೇರಳಕಟ್ಟೆಯಲ್ಲಿ ನಡೆದಿದೆ.

 

ಮೃತ ವಿದ್ಯಾರ್ಥಿನಿಯನ್ನು ನೇರಳಕಟ್ಟೆ ನಿವಾಸಿ, ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್‌ನ ವಿದ್ಯಾರ್ಥಿನಿ ಫಾತಿಮಾ ಇಝಾಹಾ ಇಲ್ಯಾಸ್ ಎಂದು ಗುರುತಿಸಲಾಗಿದೆ.

 

ಶಾಲೆ ಮುಗಿದ ಬಳಿಕ ಬಸ್ಸಿನಲ್ಲಿ ಬಂದಿದ್ದ ಬಾಲಕಿ ನೇರಳಕಟ್ಟೆಯಲ್ಲಿ ಇಳಿದು ರಸ್ತೆ ದಾಟಲು ಮುಂದಾಗಿದ್ದಳು. ಈ ಸಂದರ್ಭದಲ್ಲಿ ವೇಗವಾಗಿ ಬಂದ ಲಾರಿ ಆಕೆಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.