20 November 2026 |

ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಮೊದಲ ಬಾರಿಗೆ ಹಿಪ್ ರಿಪ್ಲೇಸ್‌ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ

  • 19 Nov 2026 06:23:02 PM

ಬಂಟ್ವಾಳ: ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಇದೇ ಮೊದಲ ಬಾರಿಗೆ ಸಂಪೂರ್ಣ ಹಿಪ್ ರಿಪ್ಲೇಸ್‌ಮೆಂಟ್ (ಸೊಂಟದ ಕೀಲು ಬದಲಾವಣೆ) ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ.

 

ಆಸ್ಪತ್ರೆಯ ವೈದ್ಯಕೀಯ ತಂಡವು ಈ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಸರ್ಕಾರಿ ಆಸ್ಪತ್ರೆಯ ವೈದ್ಯಕೀಯ ಸೇವೆಯಲ್ಲಿ ಇದೊಂದು ಮಹತ್ವದ ಸಾಧನೆಯಾಗಿದೆ.

 

ಸಾಮಾನ್ಯವಾಗಿ ಇಂತಹ ಶಸ್ತ್ರಚಿಕಿತ್ಸೆಗಳಿಗೆ ಖಾಸಗಿ ಆಸ್ಪತ್ರೆಗಳನ್ನು ಅವಲಂಬಿಸಬೇಕಾದ ಪರಿಸ್ಥಿತಿ ಇರುತ್ತದೆ. ಆದರೆ ಇದೀಗ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿಯೇ ಈ ರೀತಿಯ ಸುಧಾರಿತ ಚಿಕಿತ್ಸಾ ಸೌಲಭ್ಯ ದೊರೆಯುತ್ತಿರುವುದು ಸಾರ್ವಜನಿಕರಿಗೆ ಅನುಕೂಲವಾಗಲಿದೆ.

 

ಈ ಬೆಳವಣಿಗೆಯಿಂದ ಸ್ಥಳೀಯ ಸರ್ಕಾರಿ ಆರೋಗ್ಯ ಸೇವೆಯ ಸಾಮರ್ಥ್ಯ ಮತ್ತಷ್ಟು ಹೆಚ್ಚಿದಂತಾಗಿದೆ.