22 November 2026 |

ಬಂಟ್ವಾಳದಲ್ಲಿ ₹8.35 ಲಕ್ಷ ದರೋಡೆ ಪ್ರಕರಣ ಭೇದಿಸಿದ ಪೊಲೀಸರು: ಮೂವರು ಆರೋಪಿಗಳ ಬಂಧನ

  • 21 Nov 2026 08:59:27 AM

ಬಂಟ್ವಾಳ: ತಾಲೂಕಿನ ಪಾಣೆಮಂಗಳೂರು ಸಮೀಪ ನಡೆದ ₹8.35 ಲಕ್ಷ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

 

ಹಣ ಸಂಗ್ರಹಿಸಿಕೊಂಡು ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ₹8.35 ಲಕ್ಷ ದೋಚಿದ್ದರು. ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು ಇದೀಗ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

 

ಬಂಧಿತರಿಂದ ₹2.01 ಲಕ್ಷ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಳಿಕ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.