22 November 2026 |

ಪುತ್ತೂರು: ರಸ್ತೆ ಮಧ್ಯೆ ಮಲಗಿದ ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ – ವಾಹನ ಸಂಚಾರಕ್ಕೆ ಅಡಚಣೆ

  • 21 Nov 2026 06:20:23 PM

ಪುತ್ತೂರು: ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬರು ನಗರದ ಪ್ರಮುಖ ರಸ್ತೆಯ ಮಧ್ಯದಲ್ಲೇ ಮಲಗಿಕೊಂಡು ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿದ ಘಟನೆ1 ಪುತ್ತೂರು ಪೇಟೆಯಲ್ಲಿ ನಡೆದಿದೆ.

 

ನಗರದ ಮುಖ್ಯ ರಸ್ತೆಯಲ್ಲಿ ವ್ಯಕ್ತಿಯೊಬ್ಬರು ಮದ್ಯದ ನಶೆಯಲ್ಲಿ ರಸ್ತೆಯ ಮಧ್ಯಭಾಗದಲ್ಲೇ ಮಲಗಿದ್ದರಿಂದ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು. ಇದರಿಂದ ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ಮತ್ತು ಪ್ರಯಾಣಿಕರು ಕೆಲಕಾಲ ಪರದಾಡುವಂತಾಯಿತು.

 

ಘಟನೆಯ ಮಾಹಿತಿ ತಿಳಿದ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ, ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿಯನ್ನು ಅಲ್ಲಿಂದ ತೆರವುಗೊಳಿಸಿದರು. ಬಳಿಕ ವಾಹನ ಸಂಚಾರ ಸುಗಮಗೊಳಿಸಿ ಸಾರ್ವಜನಿಕರಿಗೆ ಉಂಟಾಗಿದ್ದ ತೊಂದರೆಯನ್ನು ನಿವಾರಿಸಿದರು.