ಸುಳ್ಯ: ಪೆರಾಜೆ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಕಾರು ಮತ್ತು ಆಟೋರಿಕ್ಷಾ ನಡುವೆ ಅಪಘಾತ ಸಂಭವಿಸಿ, ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ವರದಿಯಾಗಿದೆ.
ಸುಳ್ಯದಿಂದ ಗೋಣಿಕೊಪ್ಪದ ಕಡೆಗೆ ವಿನು ಎಂಬವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಇದೇ ಸಂದರ್ಭದಲ್ಲಿ ಅರಂತೋಡು ಕಡೆಯಿಂದ ಸುಳ್ಯಕ್ಕೆ ಬರುತ್ತಿದ್ದ ಆಟೋರಿಕ್ಷಾ ಕಾರಿಗೆ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಆಟೋರಿಕ್ಷಾ ರಸ್ತೆಯಲ್ಲಿ ಪಲ್ಟಿಯಾಗಿದ್ದು, ಕಾರು ಹಾಗೂ ರಿಕ್ಷಾ ಎರಡೂ ವಾಹನಗಳಿಗೆ ಹಾನಿಯಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ರಿಕ್ಷಾ ಚಾಲಕನನ್ನು ತಕ್ಷಣ ಸುಳ್ಯದ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ.





