25 November 2026 |

ಉಡುಪಿ: ಕಾಂಗ್ರೆಸ್ ಗ್ಯಾರಂಟಿ ಸಮಾವೇಶದಿಂದ ಮರಳುತ್ತಿದ್ದ ಪ್ರವಾಸಿ ಬಸ್ ಅಪಘಾತ; ಹಲವರಿಗೆ ಗಾಯ

  • 25 Nov 2026 03:45:49 PM

ಉಡುಪಿ: ಕಾಂಗ್ರೆಸ್‌ ಗ್ಯಾರಂಟಿ ಸಮಾವೇಶದಲ್ಲಿ ಪಾಲ್ಗೊಂಡು ಸ್ವಗ್ರಾಮಕ್ಕೆ ವಾಪಸ್ ತೆರಳುತ್ತಿದ್ದ ಪ್ರವಾಸಿ ಬಸ್ಸೊಂದು ಅಪಘಾತಕ್ಕೀಡಾಗಿ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಆನೆಗುಡ್ಡೆ ಗೋಪುರದ ಸಮೀಪ ನಡೆದಿದೆ.

 

ತ್ರಾಸಿಯಿಂದ ಸುಮಾರು 30 ಪ್ರಯಾಣಿಕರನ್ನು ಕರೆತಂದಿದ್ದ ಈ ಬಸ್ ಉಡುಪಿಯಲ್ಲಿ ನಡೆದ ಕಾಂಗ್ರೆಸ್ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಿತ್ತು. ಕಾರ್ಯಕ್ರಮ ಮುಗಿದ ಬಳಿಕ ಊರಿಗೆ ಹಿಂದಿರುಗುವ ಸಂದರ್ಭದಲ್ಲಿ ಪ್ರಯಾಣಿಕರು ಕುಂದಾಪುರದ ಸಮೀಪವಿರುವ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಊಟ ಮುಗಿಸಿ ಮತ್ತೆ ತ್ರಾಸಿಯತ್ತ ಪ್ರಯಾಣ ಬೆಳೆಸಿದ್ದರು.

 

ಈ ವೇಳೆ ದೇವಸ್ಥಾನದ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿ 66ಕ್ಕೆ ಪ್ರವೇಶಿಸಿ, ಕುಂದಾಪುರದ ಕಡೆಗೆ ತೆರಳಲು ಚಾಲಕ ಬಸ್ಸನ್ನು ತಿರುಗಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.