ಮಂಗಳೂರಿನಲ್ಲಿ ರೈಲ್ವೆ ರಕ್ಷಣಾ ಪಡೆ (RPF) ಸಿಬ್ಬಂದಿ ಪ್ರಾಮಾಣಿಕತೆ ಮೆರೆದಿದ್ದಾರೆ. ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ಕಳೆದುಕೊಂಡಿದ್ದ ಸುಮಾರು ₹50 ಸಾವಿರ ಮೌಲ್ಯದ ಚಿನ್ನದ ಬಳೆಯನ್ನು ರೈಲ್ವೆ ಪೊಲೀಸರು ಪತ್ತೆಹಚ್ಚಿ ಸುರಕ್ಷಿತವಾಗಿ ಮರಳಿಸಿದ್ದಾರೆ.
ರೈಲಿನಲ್ಲಿ ಚಿನ್ನದ ಬಳೆ ಕಳೆದುಹೋಗಿರುವ ಬಗ್ಗೆ ಮಾಹಿತಿ ಲಭಿಸಿದ ಬಳಿಕ ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿ ಪರಿಶೀಲನೆ ನಡೆಸಿ ಅದನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಬಳೆಯನ್ನು ಸಂಬಂಧಪಟ್ಟ ಪ್ರಯಾಣಿಕರಿಗೆ ಹಸ್ತಾಂತರಿಸಿದ್ದಾರೆ.
ರೈಲ್ವೆ ಪೊಲೀಸರ ಸಮಯಪ್ರಜ್ಞೆ ಮತ್ತು ಪ್ರಾಮಾಣಿಕ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.





