ಮಂಗಳೂರು: ಇತ್ತೀಚಿನ ದಿನಗಳಲ್ಲಿ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಗಳಿಗೆ ಸೇರಿದ ಬಸ್ಸುಗಳಿಂದ ಅಪಘಾತ ಹೆಚ್ಚಾಗುತ್ತಿರುವ ಕಾರಣ ರಾಜ್ಯದ ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
KSRTC, BMTC, ಕಲ್ಯಾಣ ಕರ್ನಾಟಕ ಮತ್ತು ವಾಯುವ್ಯ ಕರ್ನಾಟಕ ಈ 4 ನಿಗಮದ ಬಸ್ ಚಾಲಕರಿಂದ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಸಚಿವರಿಗೆ ವರದಿ ಮುಟ್ಟಿದೆ. ಹೆಚ್ಚಿನ ಪ್ರಕರಣಗಳು ಚಾಲಕರ ನಿರ್ಲಕ್ಷದಿಂದ ನಡೆದಿದೆ ಎನ್ನಲಾಗಿದೆ.
ಚಾಲಕರ ನಿರ್ಲಕ್ಷ್ಯದಿಂದ ಹಲವು ಪ್ರಕರಣಗಳಲ್ಲಿ ಸಾರ್ವಜನಿಕರು ಪ್ರಾಣವನ್ನು ಕೂಡ ಕಳೆದುಕೊಂಡಿದ್ದಾರೆ. ಈ ಎಲ್ಲಾ ವಿಚಾರಗಳನ್ನು ಗಮದಲ್ಲಿಟ್ಟುಕೊಂಡು ಸಚಿವ ರಾಮಲಿಂಗ ರೆಡ್ಡಿ ಅವರು, ಅಜಾಗರೂಕತೆಯಿಂದ ಚಾಲನೆ ಮಾಡಿ ತೊಂದರೆ ಉಂಟು ಮಾಡುವಂತಹ ಚಾಲಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಈ ನಾಲ್ಕು ನಿಗಮಗಳ ಅಧಿಕಾರಿಗಳಿಗೆ ಸೂಚಿಸಿದ್ದಾರೆ.