29 July 2025 | Join group

'ಬ್ರಾಂಡ್ ಮಂಗಳೂರು' ಪ್ರಶಸ್ತಿ ಪಡೆದ ಹಿರಿಯ ಪತ್ರಕರ್ತ ವಿಜಯ ಕೋಟ್ಯಾನ್: ಪತ್ರಿಕಾ ಭವನದಲ್ಲಿ ಸನ್ಮಾನ

  • 26 Jun 2025 01:19:27 AM

ಮಂಗಳೂರು: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ವಿಜಯ ಕರ್ನಾಟಕ ಸುದ್ದಿ ಪತ್ರಿಕೆಯ ಹಿರಿಯ ಪತ್ರಕರ್ತರಾದ ವಿಜಯ ಕೋಟ್ಯಾನ್ ಅವರನ್ನು ಸನ್ಮಾನಿಸಿದೆ. ಅವರ ಪ್ರಸಿದ್ಧ ಲೇಖನ 'ಹುಲಿ ವೇಷಕ್ಕೆ ಖದರ್ ನೀಡಿದ್ದ ಆಸಿಫ್' ಅವರಿಗೆ ಖ್ಯಾತಿಯನ್ನು ತಂದುಕೊಟ್ಟಿದೆ ಮತ್ತು ಅವರು 'ಬ್ರಾಂಡ್ ಮಂಗಳೂರು' ಎಂಬ ಪ್ರಶಸ್ತಿಯನ್ನು ಭಾಜನರಾಗಿದ್ದಾರೆ.

 

ವಿಜಯ ಕೋಟ್ಯಾನ್ ರವರು ಹೊಸದಿಗಂತ ಸುದ್ದಿ ಪತ್ರಿಕೆಯೊಂದಿಗೆ ತನ್ನ ಪತ್ರಕರ್ತ ಸೇವೆಯನ್ನು ಪ್ರಾರಂಭಿಸಿದ್ದು, ಪ್ರಸ್ತುತ 20 ವರ್ಷಗಳಿಂದ ವಿಜಯ ಕರ್ನಾಟಕ ಕನ್ನಡ ಸುದ್ದಿ ಮಾಧ್ಯಮದಲ್ಲಿ ಹಿರಿಯ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೋಟ್ಯಾನ್ ರವರು ನೀರುಮಾರ್ಗ ಪಡುವಿನ ನಿವಾಸಿಯಾಗಿದ್ದು, ಗೋಪಾಲ ಪೂಜಾರಿ ಮತ್ತು ಕಮಲಾ ಅವರ ಮಗ.

 

2022 ರಲ್ಲಿ ಕಲಬುರ್ಗಿಯಲ್ಲಿ ನಡೆದ ಪತ್ರಕರ್ತರ ರಾಜ್ಯ ಸಂಘಗಳ ಕಾರ್ಯಕ್ರಮದಲ್ಲಿ ಅವರು ಡ್ರಗ್ಸ್ ಗೆ ಸಂಬಂಧಿತ ವರದಿಯು ಪ್ರಶಸ್ತಿಯನ್ನು ಗೆದ್ದಿತ್ತು. ಬಿ.ಎಸ್. ವೆಂಕಟರಾಂ ರಾಜ್ಯ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಅವರಿಗೆ 'ಅಭಿಮಾನಿ ದತ್ತಿ ಪ್ರಶಸ್ತಿ' ನೀಡಿ ಗೌರವಿಸಲಾಗಿತ್ತು.

 

ಜೂನ್ 25 ರಂದು ಬೆಳಿಗ್ಗೆ 11 ಗಂಟೆಗೆ ಪತ್ರಿಕಾ ಭವನದಲ್ಲಿ ಮಂಗಳೂರು ಪೊಲೀಸ್ ಅಧೀಕ್ಷಕರು ಸುಧೀರ್ ಕುಮಾರ್ ರೆಡ್ಡು ಪ್ರಶಸ್ತಿ ಪ್ರಧಾನ ಮಾಡಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. ಉಪಸ್ಥಿತರಿದ್ದರು.

 

ಹಿರಿಯ ಪತ್ರಕರ್ತ ಜೈದೀಪ್ ಶೆಣೈ, ಪತ್ರಿಕೋದ್ಯಮ ಉಪನ್ಯಾಸಕ ಗುರುಪ್ರಸಾದ್ ಬ್ರಾಂಡ್ ಮಂಗಳೂರು, ಸಿಸಿಆರ್ ಬಿ ಎಸಿಪಿ ಗೀತಾ ಕುಲಕರ್ಣಿ ಅವರು ಮಂಗಳೂರು ಪ್ರಶಸ್ತಿಗೆ ತೀರ್ಪುಗಾರರಾಗಿದ್ದರು ಎಂದು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.