ಪುತ್ತೂರು: ನಗರದಲ್ಲಿ ಭಾರಿ ಸುದ್ದಿ ಎಬ್ಬಿಸಿರುವ ಹೆಣ್ಣುಮಗಳೊಬ್ಬಳ ಗರ್ಭಿಣಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೆಲ ದಿನಗಳಿಂದ ತಪ್ಪಿಸಿಕೊಂಡಿದ್ದ ಆರೋಪಿ ಕೃಷ್ಣ ರಾವ್ (21) ನನ್ನು ಮೈಸೂರಿನಲ್ಲಿ ನಿನ್ನೆ ಮಧ್ಯರಾತ್ರಿ ಬಂಧಿಸಿದ್ದಾರೆ.
ಸಂತ್ರಸ್ತೆ ಹೆಣ್ಣುಮಗಳು ಈಗಾಗಲೇ ಮಗುವಿದೆ ಜನ್ಮ ನೀಡಿದ್ದು, ವಿಚಾರಣೆಗಾಗಿ ಮಂಗಳೂರು ನ್ಯಾಯಾಲದಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಆಧಾರದ ಮೇಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇದೀಗ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಶ ಪಡೆಸಿಕೊಂಡಿರುವುದರಿಂದ ಪ್ರಕರಣ ಹೊಸ ತಿರುವು ಪಡೆಯಲಿದೆ.
ಸಂತ್ರಸ್ತೆಯ ತಾಯಿ ಮಾಧ್ಯಮಗಳ ಜೊತೆ ನನ್ನ ಮಗಳಿಗೆ ನ್ಯಾಯ ಒದಗಿಸಿಕೊಡಿ ಎಂದು ಬೇಡಿಕೊಂಡಿದ್ದು, ಎಸ್ ಡಿ ಪಿ ಐ ಸಂಘಟನೆ ಮೂಲಕ ಪುತ್ತೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಹಿಂದೂ ಸಂಘಟನೆಗಳು ಹಿಂದೂ ಹೆಣ್ಣು ಮಗಳಿಗೆ ನ್ಯಾಯ ದೊರೆಕಿಸುವಲ್ಲಿ ಹಿಂದೇಟು ಹಾಕುತ್ತಿದೆ ಎಂದು ಆರೋಪಿಸಿದ್ದರು.
ಇದೀಗ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ ಈ ಪ್ರಕರಣಕ್ಕೆ ಹೊಸ ತಿರುವನ್ನು ನೀಡಲಿದ್ದು, ಕಾನೂನು ರೀತಿಯಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳುವ ಸಾಧ್ಯತೆ ಇದೆ.