ಮಂಗಳೂರು: ಹಿಂದೂ ನಾಯಕ ಹಾಗೂ ವಿಎಚ್‌ಪಿ (VHP) ಮುಖಂಡ ಶರಣ್ ಪಂಪ್ವೆಲ್ ಅವರ ವಿರುದ್ಧ ಪ್ರಚೋದನಕಾರಿ ಭಾಷಣ ನೀಡಿದ ಆರೋಪದ ಮೇಲೆ ಮಂಗಳೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಈ ಭಾಷಣವು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆ ನಂತರ ಸಾಂಪ್ರದಾಯಿಕ ಉದ್ವಿಗ್ನತೆಗೆ ಕಾರಣವಾಗಿದೆಯೆಂದು ಆರೋಪಿಸಲಾಗಿದೆ.
ಇದೀಗ ಶರಣ್ ಪಂಪ್ವೆಲ್ ಅವರು ತಮ್ಮ ವಿರುದ್ಧದ ಎಫ್‌ಐಆರ್ ರದ್ದುಪಡಿಸಲು ಕರ್ನಾಟಕ ಹೈಕೋರ್ಟ್ ಗೆ ಮೊರೆ ಹೋಗಿದ್ದು, ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದು, ಬಂಧನ ಮಾಡಬಾರದು ಎಂದು ಸರ್ಕಾರಕ್ಕೆ ಸೂಚನೆ ನೀಡಿದೆ. ಹಾಗೆಯೇ ಅವರು ಪೊಲೀಸ್ ತನಿಖೆಗೆ ಸಹಕರಿಸಬೇಕು ಎಂಬ ನಿಬಂಧನೆಗೂ ಒಳಪಡಿದ್ದಾರೆ. ಪಂಪ್ವೆಲ್ ಅವರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದರು.
ಇದೆಯೇ ರೀತಿಯಲ್ಲಿ, ವಿಎಚ್‌ಪಿ ಕಾರ್ಯಕರ್ತ ನವೀನ್ ನೆರಿಯ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಕೂಡ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಕಾನೂನು ಪ್ರಕ್ರಿಯೆಯ ಮುಂದಿನ ಕ್ರಮಕ್ಕೆ ತನಿಖೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಇವರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ರವರೆ ವಾದ ಮಂಡಿಸಿದ್ದರು.