ಕಲಬುರಗಿ / ಥಾಣೆ: ಡ್ರಗ್ಸ್ ಸಾಗಾಣಿಕೆ ಪ್ರಕರಣದಲ್ಲಿ ಕರ್ನಾಟಕದ ಸಚಿವ ಪ್ರಿಯಾಂಕ ಖರ್ಗೆಯ ಆಪ್ತ ವ್ಯಕ್ತಿ ಹಾಗೂ ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿ ಅವರನ್ನು ಮಹಾರಾಷ್ಟ್ರದ ಥಾಣೆ ನಗರದ ಪೊಲೀಸರು ಬಂಧಿಸಿದ್ದಾರೆ.
ಈತನ ವಿರುದ್ಧ 120 ಕ್ಕೂ ಹೆಚ್ಚು ಮಾದಕ ವಸ್ತುಗಳು ಪತ್ತೆಯಾಗಿದ್ದು, ಎನ್‌ಡಿಪಿಎಸ್ (NDPS) ಕಾಯ್ದೆ ಅಡಿಯಲ್ಲಿ ಥಾಣೆಯ ಕಲ್ಯಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬಂಧನದ ವಿಚಾರ ರಾಜ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೀಡಾಗಿದ್ದು, ಮುಂದಿನ ದಿನಗಳಲ್ಲಿ ತನಿಖೆಯಾದ ಬಳಿಕ ಹೆಚ್ಚಿನ ವಿವರಗಳು ಬಹಿರಂಗವಾಗುವ ಸಾಧ್ಯತೆ ಇದೆ.