29 July 2025 | Join group

ನೆಲ್ಯಾಡಿ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಗುಡ್ಡ ಕುಸಿತ: ವಾಹನ ಸಂಚಾರಕ್ಕೆ ತಾತ್ಕಾಲಿಕ ತಡೆ

  • 17 Jul 2025 02:10:12 PM

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಉಪ್ಪಿನಂಗಡಿಯ ನೆಲ್ಯಾಡಿ ಸಮೀಪ ಮಣ್ಣಗುಂಡಿ ಎಂಬಲ್ಲಿ ಗುರುವಾರ ಭಾರಿ ಮಳೆಗೆ ಗುಡ್ಡ ಕುಸಿತ ಸಂಭವಿಸಿದೆ. ಪರಿಣಾಮವಾಗಿ ರಸ್ತೆ ಮೇಲೆ ಭಾರೀ ಪ್ರಮಾಣದಲ್ಲಿ ಮಣ್ಣು ಬಿದ್ದು, ವಾಹನ ಸಂಚಾರಕ್ಕೆ ತಾತ್ಕಾಲಿಕ ತಡೆ ಉಂಟಾಗಿದೆ.

 

ಮಣ್ಣು ತೆಗೆಯುವ ಕಾರ್ಯ ಈಗಾಗಲೇ ಪ್ರಾರಂಭವಾಗಿದ್ದು, ಕಡಿಮೆಗಿಂತ ಕಡಿಮೆ 2-3 ಗಂಟೆಗಳ ಕಾಲ ಈ ಕಾರ್ಯ ಸಾಗುವ ನಿರೀಕ್ಷೆ ಇದೆ. ಮಣ್ಣು ಇನ್ನೂ ಕುಸಿಯುತ್ತಿರುವ ಕಾರಣದಿಂದ, ಮಧ್ಯಾಹ್ನದವರೆಗೆ ಕ್ಲೀನಿಂಗ್ ಕಾರ್ಯ ಮುಂದುವರಿಯುವ ಸಾಧ್ಯತೆ ಇದೆ.

 

ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ. ಅವರು, ಮಂಗಳೂರು-ಬೆಂಗಳೂರು ನಡುವೆ ಸಂಚರಿಸುವ ವಾಹನಗಳು ಬದಲಿ ರಸ್ತೆಯ ಬಳಕೆ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ. ಸಾರ್ವಜನಿಕರು ಎಚ್ಚರಿಕೆಯಿಂದ ಮತ್ತು ಸುರಕ್ಷಿತವಾಗಿ ಪ್ರಯಾಣ ಮಾಡಬೇಕು ಎಂದು ಮನವಿ ಮಾಡಲಾಗಿದೆ.