ಪುತ್ತೂರು: ಬಂಟರ ಸಂಘದ ಶೈಕ್ಷಣಿಕ, ಸಾಂಸ್ಕೃತಿಕ ಚಟುವಟಿಕೆಗಳಿಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕಮ್ಮಿಂಜೆ ಗ್ರಾಮದಲ್ಲಿ ಮೂರು ಎಕರೆ ಗೋಮಾಳ ಜಮೀನನ್ನು ಮಂಜೂರು ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
"ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ 3 ಎಕರೆ ಜಮೀನು ಮಂಜೂರು ಮಾಡಲು ಅನುಮೋದನೆ ದೊರೆತಿದೆ. ಶ್ರೀಮಂತ ಸಾಂಸ್ಕೃತಿಕ ಹಿನ್ನೆಲೆ ಹೊಂದಿರುವ ಬಂಟರ ಸಮಾಜದ ಸಮಾಜಮುಖಿ ಕಾರ್ಯಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಂಡಿದ್ದು, ಸಮಸ್ತ ಬಂಟರ ಸಮಾಜಕ್ಕೆ ಅಭಿನಂದನೆ ತಿಳಿಸಲು ಬಯಸುತ್ತೇನೆ..” ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಈ ಮೂಲಕ ಬಂಟ ಸಮುದಾಯದ ಸಮಾಜಮುಖಿ ಕಾರ್ಯಗಳನ್ನು ಗುರುತಿಸುವ ಪ್ರಯತ್ನವನ್ನು ರಾಜ್ಯ ಸರಕಾರ ಮಾಡಿದಂತಿದೆ.