25 July 2025 | Join group

ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ವಶಪಡಿಸಿಕೊಂಡ ಹಣ ಹಿಂತಿರುಗಿಸುವಂತೆ ಗೋವಿಂದಬಾಬು ಹೈಕೋರ್ಟಿಗೆ ಅರ್ಜಿ

  • 20 Jul 2025 02:25:09 PM

ಬೆಂಗಳೂರು: ಚೈತ್ರಾ ಕುಂದಾಪುರ, ಅಭಿನವಶ್ರೀ ಹಾಲವೀರಪ್ಪಜ್ಜ ಸೇರಿದಂತೆ ಹಲವರ ವಿರುದ್ಧ ದಾಖಲಾಗಿರುವ 5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಹೊಸ ಬೆಳವಣಿಗೆ ನಡೆದಿದೆ. ದೂರುದಾರ ಉದ್ಯಮಿ ಗೋವಿಂದಬಾಬು ಪೂಜಾರಿ ಅವರು ತಮ್ಮ ಹಣವನ್ನು ಹಿಂತಿರುಗಿಸಲು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

 

ಈ ಪ್ರಕರಣವನ್ನು ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ವಿಚಾರಣೆ ನಡೆಸಿದ್ದು, ಸಂಬಂಧಿತ ಆರೋಪಿಗಳ ವಿರುದ್ಧದ ವಿಚಾರಣೆಯನ್ನು ಮುಂದೂಡಿದೆ.

 

ಗೋವಿಂದಬಾಬು ಅವರ ಪರದಿಂದ ಹಾಜರಾದ ಹಿರಿಯ ವಕೀಲ ಚಂದ್ರಮೌಳಿ ಅವರು, “ಚೈತ್ರಾ ಕುಂದಾಪುರ ಬಿಜೆಪಿಯಿಂದ ಟಿಕೆಟ್ ಕೊಡಿಸುವ ನೆಪದಲ್ಲಿ ಹಣ ಪಡೆದಿದ್ದಾರೆ. ಈಗ ಅವರು ಬಿಗ್ ಬಾಸ್ ಸೆಲೆಬ್ರಿಟಿಯಾಗಿ ಗುರುತಿಸಿಕೊಂಡಿದ್ದಾರೆ. ಪೊಲೀಸರು ವಶಪಡಿಸಿಕೊಂಡಿರುವ ಹಣವನ್ನು ನಮಗೆ ಮರಳಿಸಬೇಕೆಂದು ನಾವು ಅರ್ಜಿ ಸಲ್ಲಿಸಿದ್ದೆವು. ಆದರೆ ಅದನ್ನು ವಜಾ ಮಾಡಲಾಗಿದೆ. ಆದ್ದರಿಂದ ಈಗ ಹೈಕೋರ್ಟ್‌ಗೆ ಮೊರೆ ಹೋಗಿದ್ದೇವೆ,” ಎಂದು ವಾದ ಮಂಡಿಸಿದರು.

 

ಈ ಕುರಿತು ಪ್ರತಿಪಕ್ಷದ ವಾದಗಳನ್ನು ಸಹ ನ್ಯಾಯಮೂರ್ತಿ ಆಲಿಸಿ, ಮುಂದಿನ ವಿಚಾರಣೆಗೆ ದಿನಾಂಕವನ್ನು ಮುಂದೂಡಿದ್ದಾರೆ.