ಬಂಟ್ವಾಳ: ನಗರದ ಗ್ರಾಮಾಂತರ ಠಾಣೆಯಲ್ಲಿ ಕಳೆದ ನಾಲ್ಕು ತಿಂಗಳಿಂದ ಸೇವೆ ನಿರ್ವಹಿಸುತ್ತಿದ್ದ ತನಿಖಾ ಪಿಎಸ್ಐ ಖೀರಪ್ಪ (55) ಶನಿವಾರ ಬಾಡಿಗೆ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವೈಯಕ್ತಿಕ ಹಾಗೂ ಹಣಕಾಸು ಸಮಸ್ಯೆಯಿಂದ ಮನಸ್ತಾಪಗೊಂಡು ಈ ಕೃತ್ಯಕ್ಕೆ ಮುಂದಾದರೆಂದು ಶಂಕಿಸಲಾಗಿದೆ. ಜುಲೈ 19ರಂದು ರಾತ್ರಿ ಗಸ್ತು ಕರ್ತವ್ಯ ನಿರ್ವಹಿಸಿದ ಅವರು, 20ರಂದು ಕರ್ತವ್ಯದ ಕರೆಗಳಿಗೆ ಪ್ರತಿಕ್ರಿಯಿಸದ ಹಿನ್ನೆಲೆ ಮನೆಯಲ್ಲಿಯೇ ಮೃತದೇಹ ಪತ್ತೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಕುಟುಂಬಸ್ಥರನ್ನು ಅಗಲಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಯು.ಡಿ.ಆರ್ ಪ್ರಕರಣ ದಾಖಲಾಗಿದೆ.