25 July 2025 | Join group

ಧರ್ಮಸ್ಥಳ ಪ್ರಕರಣ: ಎಸ್‌ಐಟಿಯಿಂದ ಯಾರೂ ಹಿಂದೆ ಸರಿದಿಲ್ಲ – ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

  • 21 Jul 2025 12:32:01 PM

ಬೆಂಗಳೂರು: ಧರ್ಮಸ್ಥಳ ಶವ ವದಂತಿ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ಕೆಲ ಅಧಿಕಾರಿಗಳು ಹಿಂದೆ ಸರಿದಿದ್ದಾರೆ ಎಂಬ ಸುದ್ದಿ ಸತ್ಯಕ್ಕೆ ದೂರವಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

 

"ಎಸ್‌ಐಟಿಗೆ ನೇಮಕಗೊಂಡ ಅಧಿಕಾರಿಗಳು ಯಾರೆನೋ ತನಿಖೆಯಿಂದ ಹಿಂದೆ ಸರಿದಿದ್ದಾರೆ ಎಂಬ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ. ಈ ತನಿಖೆಗೆ ಎಲ್ಲವೂ ಅತ್ಯಂತ ಜವಾಬ್ದಾರಿಯುತ ಮತ್ತು ಹಿರಿಯ ಅಧಿಕಾರಿಗಳನ್ನೇ ನೇಮಿಸಲಾಗಿದೆ," ಎಂದು ಅವರು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

 

ನನ್ನ ಬಳಿ ಈ ಕುರಿತು ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಇಂತಹ ಸುಳ್ಳು ವದಂತಿಗಳಿಗೆ ಜಾಗ ನೀಡಬಾರದು," ಎಂದು ತಿಳಿಸಿದ್ದಾರೆ.