27 July 2025 | Join group

ಬಂಟ್ವಾಳ ತಾಲೂಕಿನಲ್ಲಿ ಮತ್ತೊಮ್ಮೆ ಪೊಲೀಸ್ ಪಥಸಂಚಲನ: ಸುರಿಯುವ ಮಳೆಯನ್ನೂ ಲೆಕ್ಕಿಸದೆ ಬಲ ಪ್ರದರ್ಶನ

  • 27 Jul 2025 06:50:10 PM

ಬಂಟ್ವಾಳ: ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಥ ಸಂಚಲನ ನಡೆಯಿತು.

 

ಫರಂಗಿಪೇಟೆಯಲ್ಲಿ ಎಸ್ಎಎಫ್ ಕಾರ್ಯಪಡೆ ಧಾರಾಕಾರ ಸುರಿಯುವ ಮಳೆಯನ್ನೂ ಲೆಕ್ಕಿಸದೆ ಪಥ ಸಂಚಲನ ನಡೆಸಿ ಪೊಲೀಸ್ ಸಾಮರ್ಥ್ಯವನ್ನು ಪ್ರದರ್ಶಿಸಿದರು.

 

ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಹಾಗೂ ಎಸ್ಎಎಫ್ ಕಾರ್ಯಪಡೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಥಸಂಚಲನದಲ್ಲಿ ಭಾಗವಹಿಸಿದರು.

ಇತ್ತೀಚಿನ ದಿನಗಳಲ್ಲಿ ನಡೆದಿರುವ ಕೋಮು ಗಲಭೆಗಳನ್ನು ಗಮನಕ್ಕೆ ತೆಗೆದುಕೊಂಡು ನಿರಂತರ ಸುರಿಯುತ್ತಿರುವ ಮಳೆಯನ್ನೂ ಲೆಕ್ಕಿಸದೆ ಪೊಲೀಸರು ನಡೆಸಿದ ಪಥಸಂಚಲನಕ್ಕೆ ಸಾರ್ವಜನಿಕರು ಮೆಚ್ಚುಗೆ ಸೂಚಿಸಿದ್ದಾರೆ.