ಮಂಗಳೂರು: ಕೋಡಿಕಲ್ ಕ್ರಾಸ್ ಬಳಿ ಇಂದು ಬೆಳಗಿನ ಜಾವ ದಾರುಣ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರೆ ಲಾರಿಯಡಿಗೆ ಸಿಲುಕಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರಿನಿಂದ ಕೇರಳದತ್ತ ಮೀನು ಸಾಗಿಸುತ್ತಿದ್ದ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಸವಾರೆಯ ಗುರುತು ಇನ್ನೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.