ಬೆಳ್ತಂಗಡಿ: 2012ರಲ್ಲಿ ಧರ್ಮಸ್ಥಳದ ಬೂರ್ಜೆಯಲ್ಲಿ ಆನೆ ಮಾವುತ ನಾರಾಯಣ ಮತ್ತು ಅವರ ಸಹೋದರಿ ಯಮುನಾ ಹತ್ಯೆಯಾದ ಪ್ರಕರಣಕ್ಕೆ ಮರುತನಿಖೆ ನಡೆಸುವಂತೆ ಮೃತರ ಮಕ್ಕಳು ಗಣೇಶ್ ಮತ್ತು ಭಾರತಿ ಬುಧವಾರ ಎಸ್‌ಐಟಿಗೆ ಮನವಿ ಸಲ್ಲಿಸಿದರು.
ಈ ಹಿಂದೆ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಾಪಸ್ ಪಡೆದಿರುವ ಬಗ್ಗೆ ದಾಖಲೆಗಳನ್ನು ಸಹ ಎಸ್‌ಐಟಿಗೆ ಸಲ್ಲಿಸಲಾಗಿದೆ. ಅಧಿಕಾರಿಗಳು ಮೇಲಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಸಾಮಾಜಿಕ ಹೋರಾಟಗಾರ ದಿನೇಶ್ ಗಾಣಿಗ ಅವರು, ಮೊದಲಿನ ತನಿಖೆಯಲ್ಲಿ ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಲು ವಿಫಲವಾಗಿ ಸಿ ರಿಪೋರ್ಟ್ ಸಲ್ಲಿಸಿದ್ದರು ಎಂದು ಟೀಕಿಸಿದರು.
ಇದೀಗ ಎಸ್‌ಐಟಿ ಮೇಲೆ ವಿಶ್ವಾಸವಿಟ್ಟು ಮತ್ತೆ ತನಿಖೆ ನಡೆಸುವಂತೆ ಮನವಿ ಮಾಡಿದ್ದೇವೆ ಎಂದು ಅವರು ಹೇಳಿದರು.