16 September 2025 | Join group

ಹಾಸನ ಗಣೇಶೋತ್ಸವದಲ್ಲಿ ಭೀಕರ ದುರಂತ : 9 ಮಂದಿ ಬಲಿ, 5 ಇಂಜಿನಿಯರಿಂಗ್ ವಿದ್ಯಾರ್ಥಿಗಳ ಅಕಾಲಿಕ ಸಾವು

  • 13 Sep 2025 12:42:20 AM

ಹಾಸನ: ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ದುರ್ಮರಣ ಕಂಡಿದ್ದಾರೆ. 17 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅದರಲ್ಲಿ 10 ಮಂದಿ ಪ್ರಾಣಪಾಯದಿಂದ ಬಚಾವ್ ಆಗಿದ್ದು, 7 ಜನರ ಸ್ಥಿತಿ ಗಂಭೀರವಾಗಿದೆ. ಎಲ್ಲರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

ಮೆರವಣಿಗೆಯಲ್ಲಿ ಭಾಗವಹಿಸಿದ್ದ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಇವರು ಮೊಸಳೆಹೊಸಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಈ ದುರಂತದಿಂದ ಕಾಲೇಜು ಹಾಗೂ ಗ್ರಾಮದಲ್ಲಿ ಶೋಕ ಸಮುದ್ರ ಆವರಿಸಿದೆ.

 

ಘಟನೆಯ ವೇಳೆ ಹಾಸನದಿಂದ ಹೊಳೆನರಸೀಪುರದ ಕಡೆಗೆ ಸಾಗುತ್ತಿದ್ದ ಕಂಟೇನರ್ ವಾಹನ, ಬೈಕ್‌ಗೆ ಡಿಕ್ಕಿ ತಪ್ಪಿಸಲು ಯತ್ನಿಸಿ, ಮೆರವಣಿಗೆಯಲ್ಲಿ ನಡೆದಾಡುತ್ತಿದ್ದವರ ಮೇಲೆ ನುಗ್ಗಿದೆ.

 

ಚಾಲಕ ಭುವನೇಶ್ ಎಂಬಾತ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಹಾಸನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಅಪಘಾತ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿ ನಿಗ್ರಹಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.