ದೆಹಲಿ: ದಕ್ಷ ಪ್ರಾಮಾಣಿಕತೆಗೆ ಹೆಸರುವಾಸಿಯಾಗಿದ್ದ ಅಧಿಕಾರಿಯೊಬ್ಬರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕಂಟೋನ್ಮೆಂಟ್ ಮೆಟ್ರೋ ಬಳಿಯಲ್ಲಿ ಹಣಕಾಸು ಸಚಿವಾಲಯದ ಉಪ ಕಾರ್ಯದರ್ಶಿ ನವಜೋತ್ ಅವರಿಗೆ BMW ಕಾರು ಡಿಕ್ಕಿ ಹೊಡೆದು ಅವರು ಸಾವನ್ನಪ್ಪಿದರು; ಅವರ ಪತ್ನಿಗೆ ಗಂಭೀರ ಗಾಯಗಳಾಗಿವೆ.
ಗುರುದ್ವಾರ ಬಾಂಗ್ಲಾ ಸಾಹಿಬ್‌ನಿಂದ ಪತ್ನಿಯೊಂದಿಗೆ ಮನೆಗೆ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಅವರು ತುಂಬಾ ಪ್ರಾಮಾಣಿಕ ಹಾಗೂ ನಿಷ್ಠಾವಂತ ಅಧಿಕಾರಿಯಾಗಿ ಹೆಸರುವಾಸಿಯಾಗಿದ್ದರು. ಸಚಿವಾಲಯದ ಹಿರಿಯ ಅಧಿಕಾರಿಯಾಗಿದ್ದರೂ ಸಹ, ಸದಾ ಬೈಕಿನಲ್ಲೇ ಪ್ರಯಾಣಿಸುತ್ತಿದ್ದರು