16 September 2025 | Join group

ಉಳ್ಳಾಲ ದಡಕ್ಕೆ ತೇಲಿ ಬಂದ ಮೀನುಗಾರಿಕಾ ಬೋಟ್ – 13 ಮೀನುಗಾರರು ಅಪಾಯದಿಂದ ಪಾರು

  • 15 Sep 2025 07:23:26 PM

ಉಳ್ಳಾಲ: ಮೀನುಗಾರಿಕೆಗೆಂದು ತೆರಳಿದ್ದ ಮೀನುಗಾರಿಕಾ ಟ್ರಾಲರ್ ಬೋಟ್ ಆಳಸಮುದ್ರದಲ್ಲಿ ಎಂಜಿನ್ ಕೆಟ್ಟು ನಿಂತಿದ್ದು, ಸಮುದ್ರದ ಅಲೆಗಳಿಂದಾಗಿ ತೇಲುತ್ತಾ ಉಳ್ಳಾಲದ ಸೀಗೌಂಡ್ ದಡಕ್ಕೆ ಬಂದು ಅಪ್ಪಳಿಸಿದೆ. ಬೋಟಿನಲ್ಲಿದ್ದ 13 ಮಂದಿ ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ.

 

ಮಂಗಳೂರಿನ ಧಕ್ಕೆಯಿಂದ ಕೇರಳ ಭಾಗಕ್ಕೆ ನಿನ್ನೆ ರಾತ್ರಿ ಆಳ ಸಮುದ್ರ ಮೀನುಗಾರಿಕೆಗೆಂದು ಬೋಟ್ ತೆರಳುತ್ತಿತ್ತು. ಮಧ್ಯರಾತ್ರಿಯಲ್ಲಿ ಬೋಟ್ ಕೆಟ್ಟು ನಿಂತ ಕುರಿತು ಉಳಿದ ಮೀನುಗಾರಿಗಾ ಬೋಟಿನವರ ಗಮನಕ್ಕೆ ಬಾರದೇ 13 ಮಂದಿ ಮೀನುಗಾರರು ಜೀವ ಕೈಯಲ್ಲಿಟ್ಟುಕೊಂಡು ಬೋಟಿನೊಳಕ್ಕೆ ಉಳಿದಿದ್ದರು. ಅಲೆಗಳಿಂದಾಗಿ ತೇಲುತ್ತಾ ಬಂದ ಬೋಟ್ ಇಂದು ನಸುಕಿನ ಜಾವ ಸೀಗ್ರೌಂಡ್ ಸಮುದ್ರತೀರಕ್ಕೆ ಬಂದು ಅಪ್ಪಳಿಸಿದೆ.

 

ಘಟನೆಯಿಂದಾಗಿ ಬೋಟ್ ಮಾಲೀಕರಿಗೆ ಲಕ್ಷಾಂತರ ನಷ್ಟವುಂಟಾಗಿದೆ.