ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಇನ್ಮುಂದೆ ಇವಿಎಂಗಳಲ್ಲಿ ಅಭ್ಯರ್ಥಿಗಳ ಬಣ್ಣದ ಭಾವಚಿತ್ರ ಇರಲಿದೆ ಎಂದು ತಿಳಿಸಿದೆ.
ಚುನಾವಣಾ ಆಯೋಗವು 1961ರ ಚುನಾವಣಾ ನೀತಿ ನಿಯಮಗಳ ಪ್ರಕಾರ 49B ನಿಯಮದ ಅಡಿಯಲ್ಲಿ ಅಸ್ತಿತ್ವದಲ್ಲಿರುವ ನಿಯಮಗಳನ್ನ ತಿದ್ದುಪಡಿ ಮಾಡಿದೆ. ಇವಿಎಂ ಮತಪತ್ರಗಳ ವಿನ್ಯಾಸ ಮತ್ತು ಮುದ್ರಣವನ್ನು ಹೆಚ್ಚು ಸ್ಪಷ್ಟ ಮತ್ತು ಓದಲು ಸಾಧ್ಯವಾಗುವಂತೆ ಮಾಡಲು ನಿರ್ಧರಿಸಲಾಗಿದೆ.
ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸಲು ಮತ್ತು ಮತದಾರರಿಗೆ ಅನುಕೂಲ ಮಾಡಿಕೊಡಲು ಹೊಸ ಗೈಡ್ ಲೈನ್ ಪ್ರಕಟಿಸಲಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಬಾರಿ ಈ ಪ್ರಯೋಗ ನಡೆಯಲಿದೆ ಎಂದು ತಿಳಿಸಲಾಗಿದೆ.
ಇದೇ ವರ್ಷ ಬಿಹಾರ ಚುನಾವಣೆ ನಡೆಯಲಿದ್ದು, ಈ ವೇಳೆ ಇವಿಎಂಗಳಲ್ಲಿ ಅಭ್ಯರ್ಥಿಗಳ ಬಣ್ಣದ ಭಾವಚಿತ್ರ ಪ್ರಯೋಗ ನಡೆಯಲಿದೆ.