22 September 2026 |

ಪುತ್ತೂರು : ಸಿಡಿಲು ಬಡಿದು ಕೂಲಿ ಕಾರ್ಮಿಕ ಸಾವು

  • 12 Oct 2025 10:10:03 AM

ಪುತ್ತೂರು: ಪುತ್ತೂರು ತಾಲೂಕಿನಾದ್ಯಂತ ಶನಿವಾರ ಸಂಜೆ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಆನಡ್ಕ ಎಂಬಲ್ಲಿ ಈ ದುರ್ಘಟನೆ ನಡೆದಿದೆ.

 

ಆನಡ್ಕ ನಿವಾಸಿ ವಾಮನ (40) ಸಾವನ್ನಪ್ಪಿದ ವ್ಯಕ್ತಿ. ಕೂಲಿ ಕಾರ್ಮಿಕರಾಗಿದ್ದ ವಾಮನ ಅವರು ಸಂಜೆ ಸುಮಾರು 5.30ರ ವೇಳೆಗೆ ತನ್ನ ಕೆಲಸ ಮುಗಿಸಿ ಮನೆಗೆ ಬಂದು ಮನೆಯ ಮುಂಭಾಗದಲ್ಲಿ ಕುಳಿತುಕೊಂಡಿದ್ದ ವೇಳೆಯಲ್ಲಿ ಸಿಡಲು ಬಡಿದಿದ್ದು, ಗಂಭೀರ ಗಾಯಗೊಂಡು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.