ದಕ್ಷಿಣ ಕನ್ನಡ: ರಾಜ್ಯ ಸರ್ಕಾರ ಆರ್.ಎಸ್.ಎಸ್ ನಿಷೇಧ ಮಾಡಿಲ್ಲ. ಶಾಲಾ – ಕಾಲೇಜು ಆವರಣದಲ್ಲಿ ಸಂಘ ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಹೊರಡಿಸಿರುವ ಆದೇಶದಲ್ಲಿ ಆರ್.ಎಸ್.ಎಸ್ ಎಂದು ಎಲ್ಲಿಯೂ ಉಲ್ಲೇಖವಾಗಿಲ್ಲ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಆದೇಶದಲ್ಲಿ ಯಾವುದೇ ನಿರ್ದಿಷ್ಟ ಸಂಘ ಅಥವಾ ಸಂಸ್ಥೆ ಎಂದು ಇಲ್ಲ. ಬಿಜೆಪಿ ಸರ್ಕಾರ ಆದೇಶ ಮಾಡಿದ್ದನ್ನೇ ನಾವು ಪುನರುಚ್ಚರಿಸಿದ್ದೇವೆ. ಅವರು ಮಾಡಬಹುದು, ನಾವು ಮಾಡಬಾರದೇ? ಎಂದು ಪ್ರಶ್ನಿಸಿದ್ದಾರೆ.
2013ರಲ್ಲಿ ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿಗಳಿದ್ದ ಸಂದರ್ಭದಲ್ಲಿ ಸಂಘ ಸಂಸ್ಥೆಗಳು ಶಾಲಾ ಕಾಲೇಜು ಆವರಣದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದನ್ನು ನಿಷೇಧಿಸಿದ್ದರು. ಜಗದೇಶ ಶೆಟ್ಟರ್ ಅವರು ಶಿಕ್ಷಣ ಇಲಾಖೆ ಆದೇಶ ಮಾಡಿತ್ತು ನಾನಲ್ಲ ಎಂದಿದ್ದಾರೆ. ಇವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೇ ಆದೇಶ ಹೊರಡಿಸಿದ್ದಾರೆ ಎಂದು ತಿಳಿಸಿದ್ದಾರೆ.
ಸಂಘ ಸಂಸ್ಥೆಗಳಿಗೆ ಅನುಮತಿ ಕೊಡಲೇಬೇಕು ಎಂದು ಏನಿಲ್ಲ. ಶಾಂತಿ ಸುವ್ಯವಸ್ಥೆ ಮೇಲೆ ಬೀರುವ ಪರಿಣಾಮವನ್ನು ಯೋಚಿಸಿ ಅನುಮತಿ ನೀಡುವುದು, ಬಿಡುವುದು ಅವಲಂಬಿತವಾಗಿದೆ ಎಂದಿದ್ದಾರೆ.