ಬೆಂಗಳೂರು : ವಿಜಯಪುರ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಗೆ ಕೊನೆಗೂ ಬಿಜೆಪಿ ಕೇಂದ್ರ ಶಿಸ್ತು ಕಮಿಟಿ ಉಚ್ಚಾಟನೆ ಮಾಡಿದ್ದಾರೆ. 6 ವರ್ಷಗಳ ಕಾಲ ಬಿಜೆಪಿ ಹೈ ಕಮಾಂಡ್ ಉಚ್ಚಾಟಿಸಿದೆ. ಬಿಜೆಪಿ ಶಿಸ್ತು ಸಮಿತಿ ಎರಡು ಬಾರಿ ಶೋಕಾಸ್ ನೋಟಿಸ್ ನೀಡಿದ್ದರೂ ಪದೇ ಪದೇ ಪಕ್ಷದ ವಿರೋಧಿ ಚಟುವಟಿಕೆ, ಪಕ್ಷದ ಶಿಸ್ತು ಉಲ್ಲಂಘನೆ ಮಾಡುತ್ತಿದ್ದರು. ಕೊನೆಗೆ ಫೆಬ್ರವರಿ 10 ರಂದು ಶೋಕಾಸ್ ನೋಟಿಸ್‌ಗೆ ಯತ್ನಾಳ್ ಉತ್ತರ ನೀಡಿದ್ದರು.
ವಿಜೇಯೇಂದ್ರ ಮತ್ತು ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿದ್ದ ಯತ್ನಾಳ್ ಗೆ ಹೈಕಮಾಂಡ್ ಶಾಕ್ ಕೊಟ್ಟಿದೆ. ಇದರ ಮೂಲಕ ಇತರ ರೆಬಲ್ ನಾಯಕರಿಗೂ ಪರೋಕ್ಷವಾಗಿ ಎಚ್ಚರಿಕೆಯ ಸಂದೇಶ ಕಳುಹಿಸಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ವಿರುದ್ದ ಬಹಿರಂಗವಾಗಿಯೇ ಆರೋಪಗಳನ್ನು ಮಾಡಿಕೊಂಡು ಬರುತ್ತಿದ್ದು, ತಮ್ಮದೇ ತಂಡ ಕಟ್ಟಿಕೊಂಡು ಪ್ರತ್ಯೇಕ ಸಭೆ ಮಾಡುತ್ತಿದ್ದರು. ಈ ಸಂಬಂಧ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿತ್ತು. ಆದರೂ ಯತ್ನಾಳ್ ಸೈಲೆಂಟ್ ಇದರೇ ತಮ್ಮ ಅಬ್ಬರ ಮುಂದುವರಿಸಿದ್ದರು. ಹೀಗಾಗಿ ಇತ್ತೀಚೆಗೆಷ್ಟೇ ಮತ್ತೊಂದು ಶೋಕಾಸ್ ನೀಡಲಾಗಿತ್ತು. ಆದದರೂ ಅವರು ತಮ್ಮ ಮಾತಿನ ಸಮರ ಮುಂದುವರಿಸಿದ್ದರು. ಹೀಗಾಗಿ ಅಂತಿಮವಾಗಿ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸಿದೆ.
ವಿಜಯೇಂದ್ರ ಮತ್ತು ರಾಘವೇಂದ್ರ ನಿನ್ನೆ ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ರವರನ್ನು ಭೇಟಿ ಮಾಡಿ, ದೆಹಲಿಯಲ್ಲಿ ಬೀಡು ಬಿಟ್ಟಿದ್ದರು. ಯತ್ನಾಳ್ ಜೊತೆ ಇನ್ನಿತರ ನಾಯಕರಿಗೆ ಕೂಡ ಇದರ ಮೊದಲು
ಯತ್ನಾಳ್ ಹಾಗೂ ಬಿವೈ ವಿಜಯೇಂದ್ರ ಅವರು ದೆಹಲಿಯಲ್ಲಿ ಇರುವಾಗಲೇ ಉಚ್ಛಾಟನೆ ಆದೇಶ ಹೊರಬಿದ್ದಿದ್ದು ಅಚ್ಚರಿಗೆ ಕಾರಣವಾಗಿದೆ. ಇದರೊಂದಿಗೆ ಕೊನೆಗೂ ವಿಜಯೇಂದ್ರ ಬಣ ಮೇಲುಗೈ ಸಾಧಿಸಿದಂತಾಗಿದೆ. ಇನ್ನುಳಿದ ನಾಯಕರು ಮುಂದೆ ಯಾವ ನಡೆ ಇಡುತ್ತಾರೆ ಎನ್ನುವುದು ಕುತೂಹಲ ಮೂಡಿಸಿದೆ. ಯತ್ನಾಳ್ ರವರ ಮುಂದಿನ ನಡೆ ಹೇಗಿರುತ್ತಿದೆ ಎಂಬುವುದನ್ನು ಕಾದು ನೋಡಬೇಕಾಗಿದೆ.