ಬಿಹಾರ: ಬಿಹಾರದ ಚುನಾವಣೆ ತರಾಕ್ಕೇರುತ್ತಿದೆ. ಆರ್ ಜೆ ಡಿ ನಾಯಕ ತೇಜಸ್ವಿ ಯಾದವ್ ಅವರನ್ನು ಮಹಾಘಟ್ಬಂಧನ್ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಲಾಗಿದೆ.
ಎಲ್ಲಾ ಹಿರಿಯ ನಾಯಕರೊಂದಿಗೆ ಚರ್ಚಿಸಿದ ನಂತರ, ಮುಂಬರುವ ಬಿಹಾರ ಚುನಾವಣೆಯಲ್ಲಿ ತೇಜಸ್ವಿ ಯಾದವ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲು ನಾವು ನಿರ್ಧರಿಸಿದ್ದೇವೆ. ಅವರಿಗೆ ದೀರ್ಘ ಭವಿಷ್ಯವಿದೆ ಎಂದು ಮಹಾಘಟ್ಬಂಧನ್ ನಲ್ಲಿದ್ದ ಬಿರುಕುಗಳ ಸಮಸ್ಯೆ ನಿವಾರಣೆಗೆ ಪಾಟ್ನಾಗೆ ಆಗಮಿಸಿದ್ದ ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ಹೇಳಿದರು.
ಬಿಹಾರದಲ್ಲಿ ಎರಡು ಹಂತದ ಚುನಾವಣೆಗಳು ನವೆಂಬರ್ 6 ಮತ್ತು 11 ರಂದು ನಡೆಯಲಿದ್ದು, ನವೆಂಬರ್ 14 ರಂದು ಫಲಿತಾಂಶಗಳು ಪ್ರಕಟವಾಗಲಿವೆ